ಬೆಂಗಳೂರು: ಕಂಠೀರವ ಸ್ಟುಡಿಯೋ ಆವರಣದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆ ಮಾಡಲಾಗಿದೆ. ಸಭೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಲು ಸಿಎಂ ಅನುಮತಿ ನೀಡಿದ್ದಾರೆ. ಸ್ಮಾರಕಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ರಾಜ್ಯ ಸರ್ಕಾರವು 5 ಕೋಟಿ ರೂ. ಒದಗಿಸಲಿದೆ. ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಸೂಚನೆ ನೀಡಿದರು.
ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ, ಅಂಬರೀಶ್ ಅವರ ಸ್ಮಾರಕಕ್ಕೆ 1 ಎಕರೆ 34 ಗುಂಟೆ ಜಮೀನು ಮಂಜೂರು ಆಗಿದೆ. ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಇರುವ ಜಾಗದಲ್ಲೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಸರ್ಕಾರದಿಂದ 5 ಕೋಟಿ ರೂ. ಬಜೆಟ್ ನಲ್ಲಿ ನಿಗದಿ ಮಾಡುವ ಭರವಸೆವನ್ನು ಕೊಟ್ಟಿದ್ದು, ಆದಷ್ಟು ಬೇಗ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸಿಎಂ ಹೇಳಿದ್ದಾರೆ ಎಂದರು.
ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆಯಲ್ಲಿ ಸಭೆಯಲ್ಲಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಅಭಿಷೇಕ್, ಹಿರಿಯ ಹಾಸ್ಯ ನಟ ದೊಡ್ಡಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
Laxmi News 24×7