Breaking News

ಮೆಟ್ರೋ ಕಾಮಗಾರಿ ವೇಳೆ ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವು

Spread the love

ಬೆಂಗಳೂರು: ಮೆಟ್ರೋ ಕಾಮಗಾರಿ ಸಂದರ್ಭದಲ್ಲಿ ಸಂಭವಿಸಿದ ದುರಂತದಲ್ಲಿ ಆಟೋ ಚಾಲಕ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೃತ ಖಾಸೀಂ ಸಾಬ್ ಅವರ ಮಾವ ಸೈಯ್ಯದ್ ಖಾದರ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

ವಯಾಡೆಕ್ಟ್ ಸಾಗಿಸುತ್ತಿದ್ದ ಲಾರಿ ಚಾಲಕ, ಕಾಮಗಾರಿ ವಹಿಸಿಕೊಂಡಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 281 (ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ವಾಹನ ಚಾಲನೆ) ಹಾಗೂ‌ 106 (ನಿರ್ಲಕ್ಷ್ಯತನದಿಂದ ಸಾವಿಗೆ ಕಾರಣರಾಗುವುದು) ಹಾಗೂ ಆರೋಪದಡಿ ಯಲಹಂಕ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೆಟ್ರೋ ಕಾಮಗಾರಿಗೆ ಬಳಸುವ ವಯಾಡೆಕ್ಟ್ ಉರುಳಿದ ಪರಿಣಾಮ‌ ಆಟೋ ಚಾಲಕ ಖಾಸೀಂ ಸಾಬ್ ಸಾವನ್ನಪ್ಪಿದ ಘಟನೆ ಏಪ್ರಿಲ್ 16 ರಂದು ಬೆಳಗಿನ ಜಾವ ಕೋಗಿಲು ಕ್ರಾಸ್ ಬಳಿ ಸಂಭವಿಸಿತ್ತು. ಅವಘಡದಲ್ಲಿ ಆಟೋ ಚಾಲಕ ಖಾಸಿಂ ಸಾಬ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ