Breaking News
Home / ರಾಜ್ಯ / ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ

ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ

Spread the love

ನವದೆಹಲಿ/ಮುಂಬೈ, ಜೂ.30- ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ನಿಯಂತ್ರಣಕ್ಕೆ ಬರದೇ ಆತಂಕಕಾರಿ ಮಟ್ಟದಲ್ಲೇ ಸಾಗಿದೆ.

ಕಳೆದ 24 ತಾಸುಗಳಲ್ಲಿ ಆಘಾತಕಾರಿ ಮಟ್ಟದಲ್ಲಿ ಅಂದರೆ 18,522 ಸೋಂಕು ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 418 ಹೊಸ ಸಾವುಗಳು ಸಂಭವಿಸಿವೆ.

ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 18,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್‍ಗಳು ದಾಖಲಾಗಿರುವುದು ಇದು ಸತತ ಮೂರನೇ ದಿನ. ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ 67 ಸಾವಿರ ಹಾಗೂ ಸಾವಿನ ಪ್ರಮಾಣ 17,000 ಸನಿಹದಲ್ಲಿದೆ.

ನಿರಂತರ 21 ದಿವಸಗಳಿಂದ 10,000+ ಪ್ರಮಾಣದಲ್ಲೇ ಮುಂದುವರಿದಿದೆ. ಅಲ್ಲದೇ 14,000+ ಪಾಸಿಟಿವ್ ಕೇಸ್‍ಗಳು ದಾಖಲಾಗಿರುವುದು ಸತತ 11ನೇ ದಿನವಾಗಿದೆ. ನಿರಂತರ ಏಳು ದಿನಗಳಿಂದ 15,000ಕ್ಕೂ ಅಧಿಕ ಸಾಂಕ್ರಾಮಿಕ ರೋಗಗಳು ದೃಢಪಟ್ಟಿವೆ.

ನಾಳೆ ವೇಳೆಗೆ ದೇಶದಲ್ಲಿ ಸಾವಿನ ಪ್ರಮಾಣ ಸುಮಾರು 17,200 ಮತ್ತು ಸೋಂಕು ಬಾಧಿತರ ಸಂಖ್ಯೆ 5.68 ಲಕ್ಷ ತಲುಪುವ ಆತಂಕವಿದೆ. ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 418 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 16,893ಕ್ಕೇರಿದೆ. ಭಾರತದಲ್ಲಿ. ಸೋಂಕು ಪೀಡಿತರ ಸಂಖ್ಯೆ 5,66,840 ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

24 ತಾಸುಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಸಂಭವಿಸಿದ 418 ಸಾವಿನ ವಿವರ : ಮಹಾರಾಷ್ಟ್ರ 181, ತಮಿಳುನಾಡು 62, ದೆಹಲಿ 57, ಗುಜರಾತ್ ಮತ್ತು ಕರ್ನಾಟಕ 19, ಪಶ್ಚಿಮ ಬಂಗಾಳ 14, ಉತ್ತರಪ್ರದೇಶ 12, ಆಂದ್ರಪ್ರದೇಶ 11, ಹರಿಯಾಣ 9, ಮಧ್ಯಪ್ರದೇಶ 7, ರಾಜಸ್ತಾನ ಮತ್ತು ತೆಲಂಗಾಣ ತಲಾ 6, ಪಂಜಾಬ್ 5, ಜಾರ್ಖಂಡ್ 3, ಬಿಹಾರ ಮತ್ತು ಒಡಿಶಾ ತಲಾ 2, ಹಾಗೂ ಅಸ್ಸಾಂ, ಜಮ್ಮು-ಕಾಶ್ಮೀರ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ತಲಾ ಒಂದೊಂದು ಸಾವು ಪ್ರಕರಣ ವರದಿಯಾಗಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜುಲೈ ಮತ್ತು ಅಗಸ್ಟ್‍ನಲಲಿ ಸಾಂಕ್ರಾಮಿಕ ಸೋಂಕಿನ ಹಾವಳಿ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಈ ನಡುವೆ 24 ತಾಸುಗಳಲ್ಲಿ ಚೇತರಿಕೆ ಪ್ರಮಾಣದಲ್ಲಿ ಶೇ.59.07 ರಷ್ಟು ಏರಿಕೆ ಕಂಡುಬಂದಿದ್ದು, 3.34 ಲಕ್ಷಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿರುವುದು ಸಮಾಧಾನಕಾರ ಸಂಗತಿ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ