Breaking News

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ಳುತ್ತೇವೆ: ಸಚಿವ ಎಂಸಿ ಸುಧಾಕರ್

Spread the love

ಬೆಂಗಳೂರು, ಏಪ್ರಿಲ್ 18: ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ಸಮುದಾಯದ ವಿದ್ಯಾರ್ಥಿಯ ಜನಿವಾರ (Sacred Thread) ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಕ್ರಮಕ್ಕೆ ಸೂಚಿಸುತ್ತೇವೆ: ಮಧು ಬಂಗಾರಪ್ಪ

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿ ಜನಿವಾರ ತೆಗೆಸಿದ ಆರೋಪ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ. ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ