Breaking News

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿತು

Spread the love

ಮೈಸೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.

ನಗರದ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆ ಮುಂದೆ ಘಂಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಜನಿವಾರ ಧರಿಸುವುದು ನಮ್ಮ ಸಂಪ್ರದಾಯ. ನಮ್ಮ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಖಂಡನೀಯ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ