Breaking News

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the love

ಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ ರ‍್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಧನ್ಯ ಅವರು ಇಲ್ಲಿನ ಸಾಂಬಾರ ಮಂಡಳಿಯ ನಿವೃತ್ತ ಸಹಾಯಕ ನಿರ್ದೇಶಕ ಟಿ. ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಪಿ. ವಿಜಯಕುಮಾರಿ ದಂಪತಿಯ ಪುತ್ರಿಯಾಗಿದ್ದಾರೆ.ಈ ಹಿಂದೆ ಮೂರು ಸಲ ಯುಪಿಎಸ್​​ಸಿ ಬರೆದರೂ ಮೊದಲ ಎರಡು ಬಾರಿ ಪ್ರಿಲಿಮ್ಸ್ ಕೂಡ ಪಾಸ್ ಆಗಿರಲಿಲ್ಲ. ಇದೀಗ ಮೂರನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿದ್ದಾರೆ. ಐದನೇ ತರಗತಿವರೆಗೆ ಸಕಲೇಶಪುರ ಪಟ್ಟಣದ ರೋಟರಿ ಆಂಗ್ಲ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಧನ್ಯ, 6ರಿಂದ 12ನೇ ತರಗತಿವರೆಗೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು.

ನಿಟ್ಟೆ ತಾಂತ್ರಿಕ ಶಿಕ್ಷಣ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್​​ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು, ಇ ಅಂಡ್ ವೈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಯುಪಿಎಸ್​​ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ತಮ್ಮ ಮಗಳು ಗ್ರಂಥಾಲಯಗಳ ಪುಸ್ತಕಗಳನ್ನು ಅಧ್ಯಯನ ಮಾಡಿಯೇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಳು ಎಂದು ಪೋಷಕರು ಹೆಮ್ಮೆಯಿಂದ ಹೇಳುತ್ತಾರೆ.

ತುಂಬಾ ಬೇಸರ ಮಾಡಿಕೊಂಡಿದ್ದಳು: ”ನನ್ನ ಮಗಳು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಪರೀಕ್ಷೆ ಬರೆದಿದ್ದಳು. ಎರಡು ಬಾರಿ ಬರೆದರೂ, ಪಾಸಾಗಿರಲಿಲ್ಲ. ಆಗ ತುಂಬಾ ಬೇಸರ ಮಾಡಿಕೊಂಡಿದ್ದಳು. ಕೊನೆಯ ಪರೀಕ್ಷೆ ಬರೆಯುವೆ ಎಂದು ಹೇಳಿದಾಗ, ನಾವು ಕೂಡ ಅವಳಿಗೆ ಪ್ರೋತ್ಸಾಹ ನೀಡಿದೆವು. ಸದ್ಯ ಯುಪಿಎಸ್​​ಸಿ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ತುಂಬಾ ಖುಷಿಯಾಗಿದೆ” ಎಂದು ಧನ್ಯ ಅವರ ತಾಯಿ ಪಿ.ವಿಜಯಕುಮಾರಿ ಸಂತಸ ವ್ಯಕ್ತಪಡಿಸಿದರು.

“ನಮ್ಮ ಸಕಲೇಶಪುರದ ಹೆಣ್ಣು ಮಗಳೊಬ್ಬಳು ಯುಪಿಎಸ್​​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ತಾಲೂಕಿಗಷ್ಟೇ ಅಲ್ಲದೇ, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ. ಚಿಕ್ಕ ವಯಸ್ಸಿನಿಂದಲೇ ಏನಾದರೂ ಸಾಧಿಸಬೇಕೆಂಬ ಛಲದೊಂದಿಗೆ ನವೋದಯ ಪರೀಕ್ಷೆಯಲ್ಲಿ ಪಾಸಾಗಿ ಸಾಧನೆ ಮಾಡಿದ್ದಳು. ಈಗ ಯುಪಿಎಸ್​​ಸಿಯಲ್ಲಿ ಯಶಸ್ಸು ಕಂಡಿರುವುದು ಹೆಮ್ಮೆಯ ವಿಚಾರ” ಎಂದು ಸಕಲೇಶಪುರ ನಿವಾಸಿ, ಪತ್ರಕರ್ತ ಸುಧೀರ್ ಅವರು ಧನ್ಯ ಅವರನ್ನು ಕೊಂಡಾಡಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ