Breaking News

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the love

ಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ – ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ‍್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಹೌದು, ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ‌ ಮೆರೆದಿದ್ದಾರೆ. ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲ. ಅಲ್ಲದೇ ಇಡೀ ಊರಿಗೆ ಊರೇ ಹನುಮಂತನ ಸಾಧನೆಗೆ ಹೆಮ್ಮೆ ಪಡುತ್ತಿದೆಬಡತನ ಮೀರಿ ಪರೀಕ್ಷೆ ಪಾಸ ಮಾಡಿದ ಹಳ್ಳಿ ಹೈದ: ಹನುಮಂತ ಅವರ ಅಪ್ಪ ಮತ್ತು ಸಹೋದರ ಕುರಿ ಕಾಯುತ್ತಾ ಕೃಷಿ ಕಾಯಕ ಮಾಡುತ್ತಾರೆ. ಅವ್ವ ಅವರಿಗೆ ಸಹಾಯ ಮಾಡುತ್ತಾರೆ. ಯಾವುದೇ ಯುಪಿಎಸ್ಸಿ ಹಿನ್ನೆಲೆ ಇಲ್ಲ. ಮನೆಯಲ್ಲಿ ಬಡತನ ಹಾಸಿ ಹೊದ್ದಿದೆ. ಎಲ್ಲವನ್ನು ಮೆಟ್ಟಿ ನಿಂತು ಹನುಮಂತ ಯುಪಿಎಸ್​ಸಿ ಪಾಸ್ ಆಗುವ ಮೂಲಕ ತಂದೆ-ತಾಯಿ ಹೆಮ್ಮೆ ಪಡುವ ಸಾಧನೆಗೈದಿದ್ದಾರೆ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ