Breaking News

ರಿಕ್ಕಿ ರೈ ಶೂಟ್ ಔಟ್​ ಕೇಸ್​: ಗನ್​ಮ್ಯಾನ್​ ಅರೆಸ್​ ಮಾಡಿದ ಪೊಲೀಸರು

Spread the love

ರಾಮನಗರ: ಭೂಗತ ಲೋಕದ ಮಾಜಿ ಡಾನ್ ದಿ.​ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್​​​ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನ ರಾಮನಗರ ನ್ಯಾಯಾಲಯಕ್ಕೆ ಹಾಜರು ಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಪ್ರಕರಣದ ಹಿನ್ನೆಲೆ: ಭೂಗತ ಲೋಕದ ಮಾಜಿ ಡಾನ್​ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಶುಕ್ರವಾರ ರಾಮನಗರದ ಬಿಡದಿ ಬಳಿ ನಡೆದಿತ್ತು.ಕಳೆದ ಶುಕ್ರವಾರ ರಾತ್ರಿ 11:30ರ ಸುಮಾರಿಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದ ರಿಕ್ಕಿ ರೈ ಮೇಲೆ ದಾಳಿ ನಡೆದಿದ್ದು, ಘಟನೆಯಲ್ಲಿ ರಿಕ್ಕಿ ಮೂಗು ಹಾಗೂ ಕೈಗಳಿಗೆ ಗುಂಡೇಟು ತಗುಲಿತ್ತು . ಅವರನ್ನು ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ವಿಚಾರಣೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ