Breaking News

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹ

Spread the love

ರಾಯಚೂರು, ಏಪ್ರಿಲ್​ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು.

ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀಮಠಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಂಡಿಯಲ್ಲಿ ನಾಲ್ಕು ಕೋಟಿ ರೂ. ಕಾಣಿಕೆ ದಾಟಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ