Breaking News

ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

Spread the love

ವಿಜಯಪುರ, ಏಪ್ರಿಲ್ 25: ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್​ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್​ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್​ ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್​ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಿಎಲ್​ಇಡಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅಶನಂ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, DySP ಬಸವರಾಜ್​ ಯಲಿಗಾರ್​, ಸಿಪಿಐ ಮಲ್ಲಯ್ಯ ಮಠಪತಿ, ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗಂಡನ ಮನೆಯಲ್ಲೇ ಪತ್ನಿ ನೇಣಿಗೆ ಶರಣು

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.ದಿನೇಶ್ ಗೌಡ ಜೊತೆ ಪ್ರೀತಿಸಿ ಒಂದು ವರ್ಷ ಹಿಂದೆ ರಶ್ಮಿ ಮದುವೆಯಾಗಿದ್ದರು. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದಾರೆ. ಮೂರು ತಿಂಗಳ ಹಿಂದೆ ರಶ್ಮಿಗೆ ಗರ್ಭ ಪಾತವಾಗಿತ್ತು. ವರದಕ್ಷಿಣೆ ನೀಡಿಲ್ಲ, ಮಗು ಆಗಿಲ್ಲ ಅಂತ ಮಾನಸಿಕ ಹಿಂಸೆ ನೀಡುತ್ತಿದ್ದರು ಅಂತ ರಶ್ಮಿ ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ