Breaking News

ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್‌ ಚೋರರು ಅಂದರ್‌, 5 ದ್ವಿಚಕ್ರ ವಾಹನ ವಶಕ್ಕೆ

Spread the love

ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್‌ ಚೋರರು ಅಂದರ್‌, 5 ದ್ವಿಚಕ್ರ ವಾಹನ ವಶಕ್ಕೆ

ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಪಡಿಸಿಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಜೋರಾಗಿಯೇ ನಡೆದಿತ್ತು. ಈ ಕಳ್ಳರ ಮೇಲೆ ನಿಗಾ ವಹಿಸಿದ್ದ ಪೊಲೀಸರು ಕಳ್ಳರ ಪತ್ತೆಗಾಗಿ ತೆರೆಮರೆಯಲ್ಲಿಯೇ ಕಸರತ್ತು ನಡೆಸಿದ್ದರು. ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಸಿಪಿಐ ದಯಾನಂದ ಶೇಗುಣಸಿ, ಪಿಎಸ್‌ಐ ರುದ್ರಪ್ಪ ಗುಡದರಿ, ವಿ.ಐ.ಬಳ್ಳಾರಿ, ಸಿಬ್ಬಂದಿ ದಯಾನಂದ,

ಮುಸ್ತಫಾ ಬೀಳಗಿ, ನಾಗರಾಜ ವಡ್ಡಪ್ಪಗೋಳ, ಪ್ರದೀಪ ಕುಂದಗೋಳ, ಹನುಮಂತ ಜಟ್ಟಣ್ಣವರ ಸೇರಿದಂತೆ ಇತರರು ಕಾರ್ಯಾಚರಣೆ ನಡೆಸಿ, ಇಬ್ಬರು ಬೈಕ್ ಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ