Breaking News

ಹೊಲದಲ್ಲಿ ಪೂಜೆಗೆ ತೆರಳಿದ್ದ ಮಗ ಸಿಡಿಲಿಗೆ ಬಲಿ

Spread the love

ರಾಯಚೂರು: ಸಿಡಿಲು ಬಡಿದು‌ ಮಗ ಸಾವನ್ನಪ್ಪಿ, ತಾಯಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸಾಯಣ್ಣ(55) ಸಿಡಿಲಿಗೆ ಬಲಿಯಾದ ವ್ಯಕ್ತಿಯೆಂದು ಗುರುತಿಸಲಾಗಿದೆ. ಅವರ ತಾಯಿ ಲಕ್ಷ್ಮಮ್ಮ ಗಾಯಗೊಂಡಿದ್ದಾರೆ.

ಅಮಾವಾಸ್ಯೆ ಹಿನ್ನೆಲೆಯಲ್ಲಿ ತಾಯಿ, ಮಗ ಜಮೀನಿನಲ್ಲಿನ ತಾಯಮ್ಮನ ಗುಡಿಗೆ ಪೂಜೆ ಸಲ್ಲಿಸಲು ಹೋಗಿದ್ದರು. ಈ ಸಮಯದಲ್ಲಿ ಸಿಡಿಲು ಅಪ್ಪಳಿಸಿ ಸಾಯಣ್ಣ ಗುಡಿಯಲ್ಲೇ ಸಾವನ್ನಪ್ಪಿದ್ದಾರೆ. ತಾಯಿ 70 ವರ್ಷದ ಲಕ್ಷ್ಮಮ್ಮಗೆ ಗಂಭೀರ ಗಾಯಗಳಾಗಿದ್ದು, ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.

ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸುರಿದಿದ್ದು, ಅವಾಂತರ ಸೃಷ್ಟಿಸಿದೆ. ಭತ್ತದ ಬೆಳೆಗೆ ಭಾರಿ ಹಾನಿ ಆಗಿದೆ. ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ