Breaking News

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

Spread the love

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ನಿರ್ಮಿಸಿದ್ದು 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi). ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ  ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.ಇದಕ್ಕೂ ಮುನ್ನ ಈ ದಾಖಲೆ ವಿಜಯ್ ಝೋಲ್ ಹೆಸರಿನಲ್ಲಿತ್ತು. 2013 ರಲ್ಲಿ ನಡೆದ ಮುಂಬೈ ವಿರುದ್ಧದ ಟಿ20 ಪಂದ್ಯದಲ್ಲಿ ಮಹಾರಾಷ್ಟ್ರ ಪರ ಕಣಕ್ಕಿಳಿದಿದ್ದ 18 ವರ್ಷದ ಝೋಲ್ ಭರ್ಜರಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವೈಭವ್ ಯಶಸ್ವಿಯಾಗಿದ್ದಾರೆ.ಈ ಮೂಲಕ 14ನೇ ವಯಸ್ಸಿನಲ್ಲಿ ಸೆಂಚುರಿ ಸಿಡಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಹಾಗೂ 15 ವಯಸ್ಸಿನೊಳಗೆ 20 ಸೆಂಚುರಿ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ