Breaking News

ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

Spread the love

ಮಂಗಳೂರು, ಏಪ್ರಿಲ್ 29: ‘ಕಾಪಾಡಿ, ಕೊಳಕು ಹಿಂದೂಗಳು (Hindu) ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು (India) ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangalore) ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಅಫೀಫ ಫಾತಿಮಾ ಹೈಲ್ಯಾಂಡ್ ಆಸ್ಪತ್ರೆಯಿಂದ ವಜಾ

ಅಫೀಫ ಫಾತಿಮಾ ಪೋಸ್ಟ್​ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆಕೆಯನ್ನು ಹೈಲ್ಯಾಂಡ್ ಆಸ್ಪತ್ರೆ ಆಡಳಿತ ಮಂಡಳಿ ವಜಾಗೊಳಿಸಿದೆ. ನಂತರ ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಮಂಗಳೂರಿನ ಹೈಲ್ಯಾಂಡ್ ನ ಖಾಸಗಿ ಆಸ್ಪತ್ರೆಯ ವೈದ್ಯೆಯ ದೇಶ ಹಾಗೂ ಹಿಂದೂ ವಿರೋಧಿ ಬರವಣಿಗೆಯ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ವೈದ್ಯೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ವಿಹೆಚ್​​ಪಿ ಮುಖಂಡ ಶರಣ್ ಕುಮಾರ್ ಪಂಪ್ವೆಲ್ ಆಗ್ರಹಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ