Breaking News

ಕಾಂಗ್ರೆಸ್‍ನವರು ಪಾಕಿಸ್ತಾನದಲ್ಲಿ ಹೀರೋಗಳಾಗಿದ್ದಾರೆ:ಜೋಶಿ

Spread the love

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ತಾನದಲ್ಲಿ ಸಂಭ್ರಮಿಸಿದ್ದಾರೆ. ದೇಶದ ಭದ್ರತೆಯ ವಿಚಾರದಲ್ಲಿ ಹೇಳಿಕೆ ನೀಡಿದ ಕಾಂಗ್ರೆಸ್‍ನವರೆಲ್ಲ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸ್ವಲ್ಪವಾದರೂ ಮರ್ಯಾದೆ ಬೇಡವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ ಟೀಕಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎನ್ನಲು ನೂರಾರು ಕಾರಣ ಎಂದು ರಾಜ್ಯದ ಸಚಿವರು ಹೇಳುತ್ತಾರೆ. ಇದು ದೇಶದ್ರೋಹ ಅಲ್ಲವೇ? ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ಅವರು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಹಾಲಿನಿಂದ ಆಲ್ಕೋಹಾಲ್​ವರೆಗೆ ಬೆಲೆ ಏರಿಕೆಗೆ ಕಾಂಗ್ರೆಸ್‍ನವರ ಆಡಳಿತ ವೈಫಲ್ಯವೇ ಕಾರಣ ಎಂದ ಜೋಶಿ, ಬೆಲೆ ಏರಿಕೆ ಬಗ್ಗೆ ನಾನು ಸದನದಲ್ಲಿ ಚರ್ಚೆಗೆ ಸಿದ್ಧನೆಂದು ಹೇಳಿದರೂ ಯಾವ ಕಾಂಗ್ರೆಸ್ ಸಂಸದರೂ ಮಾತನಾಡಲಿಲ್ಲ ಎಂದು ಕುಟುಕಿದರು.

ಕಾಂಗ್ರೆಸ್‍ನವರ ಹೇಳಿಕೆ ಗ್ರಾಮಾಫೋನ್ ಇದ್ದಂತೆ. ಹೇಳಿದ್ದೇ ಹೇಳುವುದು ಅವರ ಕೆಲಸ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಒಳಗೊಳಗೆ ಬಡಿದಾಡಿಕೊಳ್ಳುತ್ತಾರೆ. ಹೊರಗೆ ಏನೇನೋ ಮಾತನಾಡುತ್ತಾರೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ