ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಬೂದಿಹಾಳ ಗ್ರಾಮದ ಶ್ರೀ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಬಿಚಗತ್ತಿ, ರವಿಂದ ಕುರಪಿ, ಚಂದ್ರಕಾಂತ್ ಮೈಲಪ್ಪಗೋಳ, ಪ್ರೇಮನಾಥ ಮರಾಠ್, ಈರಣ್ಣ ಸಂಪಗಾವಿ, ಗಣಪತಿ ಮರಾಟೆ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
Laxmi News 24×7