Breaking News

ಸ್ಟೈಪಂಡ್ ಹಗರಣ: ಕಲಬುರಗಿಯ 7 ಕಡೆಗಳಲ್ಲಿ ಇ.ಡಿ ದಾಳಿ

Spread the love

ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್‌ಗುಂದಿ ಅವರ ಮನೆ ಸೇರಿದಂತೆ ಏಳು‌ ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ.

ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಮತ್ತು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಅವರ ಸಂಬಂಧಿತ ಸ್ಥಳಗಳು ಸೇರಿದಂತೆ ಕಲಬುರಗಿಯ ಜಿಲ್ಲೆಯ 7 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.

ಪಿಎಂಎಲ್‌ಎ, 2002ರ ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ. ಏಪ್ರಿಲ್​ 30, ಮೇ 1ಹಾಗೂ 3ರಂದು ಒಟ್ಟೂ ಮೂರು ದಿನ ಶೋಧ ಕಾರ್ಯಾಚರಣೆ ನಡೆದಿದೆ. ಈ ವೇಳೆ ಎಲೆಕ್ಟ್ರಾನಿಕ್ ದಾಖಲೆಗಳ ರೂಪದಲ್ಲಿ ವಿವಿಧ ದೋಷಾರೋಪಣೆಯ ಪುರಾವೆಗಳು ಕಂಡು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ