Breaking News

ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ

Spread the love

ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ
ಜಿ.ಪಂ. ಸಿಇಓ ರಾಹುಲ್ ಶಿಂಧೆ ಅವರೊಂದಿಗೆ ಪತ್ರಕರ್ತರ ಸಂಘದಿಂದ ಸಂವಾದ ಕಾರ್ಯಕ್ರಮ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಬಾಕಿ ತೆರಿಗೆಯನ್ನು ಸಂಗ್ರಹಿಸಿ ಪ್ರತಿ ವರ್ಷ 45 ಲಕ್ಷ ತೆರಿಗೆಯನ್ನು ವಿಧಿಸಲಾಗಿದೆ. ಈ ಬಾರಿ 110 ಕೋಟಿ ದಾಖಲೆಮಟ್ಟದ ತೆರಿಗೆಯನ್ನು ಜಿಲ್ಲಾ ಪಂಚಾಯಿತಿಯೂ ಸಂಗ್ರಹಿಸಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಹೇಳಿದರು.
ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಇಂದು ವಾರ್ತಾ ಭವನದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪತ್ರಕರ್ತರು ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ 500 ಗ್ರಾಮ ಪಂಚಾಯಿತಿಗಳಿವೆ. ನರೇಗಾ ಯೋಜನೆಯಡಿ ಅತಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರಲ್ಲಿ ಆರ್ಥಿಕ ಸಬಲೀಕರಣ ಕಾಣಿಸುತ್ತಿದ್ದು, ಉದ್ಯೋಗ ಸಿಗುತ್ತಿದೆ. ನರೇಗಾ ಯೋಜನೆಯಡಿ ಕೆಲಸ ಮಾಡುವವ ಸ್ತ್ರೀ ಪುರುಷ ಕಾರ್ಮಿಕರಿಗೆ ಸಮಾನ ವೇತನವನ್ನು ನೀಡಲಾಗುತ್ತಿದೆ ಎಂದರು.
ಇನ್ನು ಹೊಸ ಪ್ರಕಲ್ಪಗಳು ಮತ್ತು ಉಳಿತಾಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆ 34 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎಸ್.ಟಿ.ಪಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಪ್ರತಿ ತಾಲೂಕಿನ 2 ಗ್ರಾಮಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿದೆ.
ಈ ಬಾರಿ ಅತಿಹೆಚ್ಚು 110 ಕೋಟಿ ತೆರಿಗೆಯನ್ನು ಜಿಲ್ಲಾ ಪಂಚಾಯಿತಿಯೂ ಸಂಗ್ರಹಿಸಿದೆ. ಅಲ್ಲದೇ ಮೊದಲಬಾರಿಗೆ ವಿದ್ಯುತ್ ಖರ್ಚು ಸೇರಿದಂತೆ ವಿವಿಧ ಖರ್ಚುಗಳನ್ನು ನಿಯಂತ್ರಿಸಿ 13 ಕೋಟಿ ರೂಪಾಯಿಯನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಉಳಿತಾಯ ಮಾಡಲಾಗಿದೆ ಎಂದರು.
ಇನ್ನು ಸಾಂಬ್ರಾ ವಿಮಾನ ನಿಲ್ದಾಣದ ತೆರಿಗೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರಣದಿಂದ ಸಾಂಬ್ರಾ ಗ್ರಾಮ ಪಂಚಾಯಿತಿಗೆ ಬರಬೇಕಾದ ತೆರಿಗೆಯನ್ನು ಈ ಬಾರಿ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದು, ವಿಮಾನ ನಿಲ್ದಾಣದಿಂದ ಪ್ರತಿ ವರ್ಷ 45 ಲಕ್ಷ ರೂಪಾಯಿ ತೆರಿಗೆಯನ್ನು ನಿಶ್ಚಯಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರತಕರ್ತರ ಸಂಘದ ಪ್ರಮುಖರಾದ ವಿಲಾಸ್ ಜೋಷಿ, ರವಿ ಉಪ್ಪಾರ, ಮಲ್ಲಿಕಾರ್ಜುನ ಮುಗಳಿ, ಸುನೀಲ್ ರಾಜಗೋಳಕರ, ಮಠದ, ಶ್ರೀಕಾಂತ್, ಮಂಜು, ಕೀರ್ತಿ ಕಾಸರಗೋಡು ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ