Breaking News

ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ

Spread the love

ಹುಬ್ಬಳ್ಳಿ: ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ
ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಶ್ವೇತಾ (29), ಅಂಜಲಿ (26),ಸಂದೀಪ್ (26), ವಿಠ್ಠಲ್ (55), ಶಶಿಕಲಾ (40) ಮೃತ ದುರ್ದೈವಿಗಳು. ಬಾಗಲಕೋಟದಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ನಿಶ್ಚಿತಾರ್ಥ ಹಿನ್ನಲೆ ಮರಳಿ ಬರುವಾಗ ಈ ಘಟನೆ ನಡೆದಿದ್ದು,
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರನ್ನು ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ