Breaking News

ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಿಂದ ಸರ್ಕಾರಿ ಬಿ.ಇಡಿ ಕಾಲೇಜಿನಲ್ಲಿ ವರ್ಡ ರೆಡ್ ಕ್ರಾಸ್ ಡೆ ಆಚರಣೆ

Spread the love

ಬೆಳಗಾವಿ : ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಿಂದ ಸರ್ಕಾರಿ ಬಿ.ಇಡಿ ಕಾಲೇಜಿನಲ್ಲಿ ವರ್ಡ ರೆಡ್ ಕ್ರಾಸ್ ಡೆ ಆಚರಣೆ
ಬೆಳಗಾವಿಯ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನ ಆಚರಿಸಲಾಯಿತು
ಸರ್ಕಾರಿ ಬಿ.ಇಡಿ ಕಾಲೇಜ್ ಪ್ರಾಚಾರ್ಯ ಎನ್. ಶ್ರೀಕಂಠ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ
ಮಾತನಾಡಿದ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯ ಅಧ್ಯಕ್ಷೆ ಡಾ.ವಿ. ಸಿ. ಬಾವಡೇಕರ ಅವರು, ಜನಹಿತ ಕಾಪಾಡುವಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಮಾದರಿಯಾಗಿದೆ. ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಣೆಯಾಗಲು ಸಾಧ್ಯವೆಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಎಸ್ ಬಿ ಕುಲಕರ್ಣಿ, ವಿಕಾಸ್ ಕಲಘಟಗಿ ಮುಖ್ಯ ಅತಿಥಿಗಳಾಗಿದ್ದರು.ಬಿಎಸ್ ಮಾಯಾ ಚಾರಿ, ಡಿ ಆರ್ ನಾಯಕ್,
ಬಿ ಡಿ ಕಾರದಗೆ, ಜಿ ವಿ ಕುಲಕರ್ಣಿ ಸೇರಿದಂತೆ ಕಾಲೇಜು ಪ್ರಾಧ್ಯಾಪಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ರೆಡ್ ಕ್ರಾಸ್ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ