ವಿಮಾನ ಪ್ರಯಾಣಿಕರಿಗೆ ಸೂಚನೆ: ಬೋರ್ಡಿಂಗ್​ಗೆ ಕನಿಷ್ಠ 3 ಗಂಟೆ ಮುಂಚೆ ಏರ್​ಪೋರ್ಟ್​ನಲ್ಲಿರಿ

Spread the love

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರು ಇನ್ಮುಂದೆ ವಿಮಾನ ಹೊರಡುವ ಕನಿಷ್ಠ ಮೂರು ಗಂಟೆ ಮುಂಚೆ ನಿಲ್ದಾಣದಲ್ಲಿ ಹಾಜರಾಗಬೇಕು ಎಂದು ಕೆಇಎ ಮನವಿ ಮಾಡಿದೆ.

ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆವಹಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಈ ಹೊಸ ನಿರ್ದೇಶನವನ್ನು ಹೊರಡಿಸಲಾಗಿದೆ.

ದೇಶದೆಲ್ಲೆಡೆ ಭದ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಹೆಚ್ಚಿಸಲಾಗಿದೆ. ಪ್ರಯಾಣಕ್ಕೂ ಮುನ್ನ ಸುಗಮ ಚೆಕ್​ ಇನ್​, ಭದ್ರತೆ ಮತ್ತು ಸರಾಗ ಬೋರ್ಡಿಂಗ್​ ಅನುಭವಕ್ಕಾಗಿ ಕನಿಷ್ಠ ಮೂರು ಗಂಟೆ ಮುನ್ನ ನಿಲ್ದಾಣ ತಲುಪುವಂತೆ ಪ್ರಯಾಣಿಕರಿಗೆ ಸಲಹೆ ನೀಡಲಾಗಿದೆ.

ಇದೇ ವೇಳೆ ಕೆಐಎ, ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುನ್ನ ವಿಮಾನ ಸೇವೆಗಳ ಅಪ್​ಡೇಟ್​ ಮಾಹಿತಿಯನ್ನು ಕೂಡ ಪರೀಕ್ಷಿಸುವಂತೆ ಕೋರಿದೆ. ಈ ಸಮಯದಲ್ಲಿ ಪರಿಸ್ಥಿತಿ ಅರ್ಥೈಸಿಕೊಂಡು ಸಹಕಾರ ನೀಡುವಂತೆ ತಿಳಿಸಿದೆಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾಗರಿಕ ವಿಮಾನ ಭದ್ರತಾ ಬ್ಯೂರೋ (ಬಿಸಿಎಎಸ್​) ಎಲ್ಲಾ ವಿಮಾನಗಳಿಗೆ ದ್ವಿತೀಯ ಲ್ಯಾಡರ್ ಪಾಯಿಂಟ್ ತಪಾಸಣೆಯನ್ನು ಕಡ್ಡಾಯಗೊಳಿಸಿದೆ. ವಿಮಾನ ನಿಲ್ದಾಣಗಳ ಟರ್ಮಿನಲ್​ಗಳಿಗೆ ಸಂದರ್ಶಕರನ್ನು ನಿಷೇಧಿಸಿದ್ದು, ಕಟ್ಟೆಚ್ಚರವಹಿಸುವಂತೆ ಸೂಚಿಸಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ