Breaking News

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ನಟ ಉಪೇಂದ್ರ, ನಟಿ ತಾರಾ ಕುಟುಂಬ ಸಮೇತ ಭೇಟಿ (

Spread the love

ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಮಂತ್ರಾಲಯದ ‌ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕುಟುಂಬ ಸಮೇತ ಭೇಟಿ ನೀಡಿದರು.

ಭಾನುವಾರ ರಿಯಲ್ ಸ್ಟಾರ್ ನಟ ಉಪೇಂದ್ರ ತಮ್ಮ ಕುಟುಂಬದೊಂದಿಗೆ ಹಾಗೂ ನಟಿ ತಾರಾ ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು.

ನಟ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ ಹಾಗೂ ಮಕ್ಕಳೊಂದಿಗೆ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದುಕೊಂಡರು. ಮೊದಲಿಗೆ ಶ್ರೀ ಮಂಚಲಮ್ಮ ದೇವಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ರಾಯರ ಮೂಲ ಬೃಂದಾವನ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಬಳಿಕ ಮಠದ ಆವರಣದಲ್ಲಿ ನಡೆದ ರಥೊತ್ಸವದಲ್ಲಿ ಭಾಗಿಯಾದರು.

ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿ, ಪೀಠಾಧಿಪತಿಗಳಿಗೆ ಸನ್ಮಾನಿಸಿದರು. ಈ ವೇಳೆ, ಮಠಾಧೀಶರು ಮಠದಿಂದ ಉಪೇಂದ್ರ ದಂಪತಿ, ಕುಟುಂಬ ಸದಸ್ಯರಿಗೆ ಫಲಮಂತ್ರಾಕ್ಷತೆ, ಶೇಷವಸ್ತ್ರ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿ ಆಶೀರ್ವದಿಸಿದರು.

ನಟಿ ತಾರಾ ಭೇಟಿ: ನಟಿ ತಾರಾ ಕುಟುಂಬವೂ ಸಹ ಭಾನುವಾರ ಮಠಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದ ದರ್ಶನ ಪಡೆದು, ವಿಶೇಷ ಪೂಜೆ ನೇರವೇರಿಸಿತು. ಬಳಿಕ ಶ್ರೀಗಳ ಆಶೀರ್ವಾದ ಪಡೆದುಕೊಂಡರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ