Breaking News

ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್​ ಸರ್ಕಾರಕ್ಕೆ 2 ವರ್ಷದ ಸಂಭ್ರಮ: ಡಿ.ಕೆ.ಶಿ

Spread the love

ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ, ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಸಂತಸ ವ್ಯಕ್ತಪಡಿಸಿದರು.

ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, “ಮೇ 20ರಂದು ವಿಜಯನಗರದಲ್ಲಿ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯುತ್ತದೆ. ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆಯ ಸಂಭ್ರಮವನ್ನು ಮುಂದೂಡಲು ಆಲೋಚಿಸಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಸಭೆ ಮಾಡಲು ತಿಳಿಸಿದ್ದೇವೆ” ಎಂದು ತಿಳಿಸಿದರು”ಕಂದಾಯ ಇಲಾಖೆಯಿಂದ 1 ಲಕ್ಷ ಪಟ್ಟಾ ಖಾತೆಗಳನ್ನು ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಇದು ನಮ್ಮ ಪ್ರಣಾಳಿಕೆಯ ಭಾಗವಾಗಿತ್ತು, ಮಾಡುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನೂ ಆಹ್ವಾನಿಸುತ್ತೇವೆ” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ