ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ…ಭೀಕರ ಹಲ್ಲೆಯ ದೃಶ್ಯ ಮೊಬೈಲ್’ನಲ್ಲಿ ಸೆರೆ.

Spread the love

ಬೆಳಗಾವಿ: ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನ ಪ್ರಶ್ನಿಸಿದಕ್ಕೆ ಹಲ್ಲೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಹನುಮಂತ ದೇವರ ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರು ಎರಚಲಾಗಿದೆ. ಇದನ್ನ ಪ್ರಶ್ನಿಸಿದಕುನ್ನಾಳ ಗ್ರಾಮದ ಲಕ್ಷ್ಮಣ್ ಮಾದರ ಮತ್ತು ಮೂವರು ಮಹಿಳೆಯರ ಮೇಲೆ ಹಲ್ಲೆ ನಡೆಸುವುದಲ್ಲದೆ. ಕಬ್ಬಿನ ರಾಡ್’ನಿಂದ ಲಕ್ಷ್ಮಣ ಮಾದರ ತಲೆಗೆ ಹೊಡೆಯಲಾಗಿದೆ.

ಮೇಲ್ವರ್ಗದ ಜನರಿಂದ ದಲಿತ ಮಹಿಳೆಯರ ಮೇಲೆ ಓಕಳಿ ನೀರು ಎರಚಿ ಹಲ್ಲೆ ಆರೋಪ ಕೇಳಿಬಂದಿದ್ದು, ಕಬ್ಬಿನದ ರಾಡ್ ನಿಂದ ತಲೆಗೆ ಹೊಡೆಯುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡ ಯುವಕನಿಗೆ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯುವಕನ ತಾಯಿ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ.

ರಾಮದುರ್ಗ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ