Breaking News

ಎಂಎನ್​ಸಿ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ₹14.23 ಲಕ್ಷ ಪೀಕಿದ HR

Spread the love

ಬೆಂಗಳೂರು: ಕೆಲಸಕ್ಕಾಗಿ ನೀವೇನಾದರೂ ಇಂಟರ್​ವ್ಯೂಗೆ ಹೋದರೆ ಹುಷಾರಾಗಿರಿ. ಕಾರಣ, ಸಂದರ್ಶನ ಮಾಡುವ ಸೋಗಿನಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಮಾನವ ಸಂಪನ್ಮೂಲ ಅಧಿಕಾರಿ (ಹೆಚ್​ಆರ್​) ಸಿಸಿಬಿ ಪೊಲೀಸರ ಅತಿಥಿಯಾಗಿದ್ಧಾನೆ.

ಮೆಕ್ರೋಸಾಪ್ಟ್​, ಬಾಷ್ ಸೇರಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 8 ಮಂದಿ ಉದ್ಯೊಗಾಂಕ್ಷಿಗಳಿಂದ 14.23 ಲಕ್ಷ ಹಣ ಪಡೆದಿದ್ದ ಖಾಸಗಿ ಕಂಪನಿ ನೌಕರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಯುವತಿಯು ನೀಡಿದ ದೂರು ಆಧರಿಸಿ ಪತ್ನೂಲ್ ಕಲಂದರ್ ಖಾನ್ (43) ಎಂಬವನನ್ನು ಬಂಧಿಸಿ, ಆತನಿಂದ 1.50 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಆರೋಪಿ ಕಲಂದರ್​ ಜೆ.ಪಿ.ನಗರದ ಸಾರಕ್ಕಿ ನಿವಾಸಿಯಾಗಿದ್ದು, ಖಾಸಗಿ ಕಂಪನಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದ. ಇದೇ ವೇಳೆ ವಂಚನೆಗೊಳಗಾದ ಯುವತಿಯು ಆರೋಪಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಕೆಲಸ ಖಾಲಿಯಿರುವುದಾಗಿ ಆನ್​ಲೈನ್​ನಲ್ಲಿ ತಿಳಿದುಕೊಂಡು ಸಂದರ್ಶನಕ್ಕೆ ಹೋಗಿದ್ದಳು.


Spread the love

About Laxminews 24x7

Check Also

ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ

Spread the love ಚಿಕ್ಕೋಡಿ : ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ ರಾಯಬಾಗ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ