Breaking News

ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸ ಕುರಿತು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್

Spread the love

ಬೆಳಗಾವಿ: ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸಗೊಳಿಸಿದ್ದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸುಳ್ಳು ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅನೀಸ್ ಉದ್ದೀನ್, ಖುಬಾನಿ, ದ್ರುಮ್ಮಿ (Anis Uddin, Khubaani, Drummi) ಎಕ್ಸ್ ಖಾತೆ ಹೋಲ್ಡರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಆರ್‌ಎಸ್ಎಸ್‌ ಕಾರ್ಯಕರ್ತರಿಂದ ಕರ್ನಲ್ ಸೋಫಿಯಾ ಖುರೇಶಿ ಮನೆ ಧ್ವಂಸಗೊಳಿಸಲಾಗಿದೆ ಎಂದು ಅನೀಸ್ ಉದ್ದೀನ್ ಪೋಸ್ಟ್ ‌ಮಾಡಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಈ ಕುರಿತು ಪರಿಶೀಲಿಸಿ, ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದರು.

ಪೊಲೀಸ್ ತನಿಖೆ ವೇಳೆ ಅನೀಸ್ ಉದ್ದೀನ್ ಕೆನಡಾದ ಬ್ರಿಟಿಷ್ ಕೊಲಂಬಿಯಾ ನಿವಾಸಿ ಎಂಬ ಮಾಹಿತಿ ಲಭ್ಯವಾಗಿತ್ತು. ಮನೆ ಧ್ವಂಸದ ಚಿತ್ರ, ಖುರೇಶಿ ಫೋಟೊ‌ ಸಮೇತ ಸುಳ್ಳು ಸುದ್ದಿಯನ್ನು ಅನೀಸ್ ಉದ್ದೀನ್ ಪೋಸ್ಟ್ ಮಾಡಿದ್ದ‌. ಕೋಮು ಸಾಮರಸ್ಯ ಹಾಳು ಮಾಡುವ ದುರುದ್ದೇಶದಿಂದ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದ ಆರೋಪದಡಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ