Breaking News

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್​

Spread the love

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ‌ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಶ್ವೇತಾ ಪೂಜಾರಿ ಮೇ 8ರಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ‌ ಪೋಸ್ಟ್ ಮಾಡಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶಾಂತ ರಾವ್ ಅವರು ದೂರು ನೀಡಿದ್ದರು.

”ಅವಹೇಳನಕಾರಿ ಪೋಸ್ಟ್​​ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಮುಂದಿನ ತನಿಖೆಗೆ ಮಂಗಳೂರು ನಗರ ಸಿಇಎನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಶ್ವೇತಾ ಪೂಜಾರಿ ಅವರ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಶಾಸಕ ಭರತ್ ಶೆಟ್ಟಿ ಖಂಡನೆ: ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ ಮೇಲೆ ಕಾಂಗ್ರೆಸ್ ಒತ್ತಡದಿಂದ ಎಫ್​ಐಆರ್ ದಾಖಲಾಗಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಹಾಗೂ ಬಿಜೆಪಿ ಮುಖಂಡರು ಖಂಡಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ