Breaking News

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ

Spread the love

ಶಿವಮೊಗ್ಗ: ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ.

ವಾಕಿಂಗ್ ಹೋಗಿದ್ದ ಹೇಮಣ್ಣ ಎಂಬುವರನ್ನು ಕೊಲೆ ಮಾಡಿದ ಆರೋಪದ ಮೇಲೆ ಮಂಜು ಎಂಬಾತನ ಬಂಧನಕ್ಕೆ ಹೊಳೆ ಹೊನ್ನೂರು ಪೊಲೀಸರು ತೆರಳಿದ್ದರು. ಈ ವೇಳೆ, ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಪೊಲೀಸರು ಆತನ ಕಾಲಿಗೆ ಗುಂಡೇಟು ಹೊಡೆದು ಹಿಡಿದಿದ್ದಾರೆ.

ಮೇ 9 ರಂದು ಬೆಳಗ್ಗೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಗ್ರಾಮದ ಹೇಮಣ್ಣ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಮಂಜು ಪ್ರಮುಖ ಆರೋಪಿ. ಈತನನ್ನು ಬಂಧಿಸಲು ಹೊಳೆಹೊನ್ನೂರು ಪೊಲೀಸ್ ಠಾಣೆಯ ಪಿಐ ಲಕ್ಷ್ಮೀಪತಿ ಹಾಗೂ ಸಿಬ್ಬಂದಿ ತೆರಳಿದ್ದರು. ಈ ವೇಳೆ ಆರೋಪಿ ಮಂಜು ಹೊಳೆಹೊನ್ನೂರು ಪೊಲೀಸ್ ಠಾಣೆಯ ಪ್ರಕಾಶ್ ಎಂಬುವರ ಮೇಲೆ ಹಲ್ಲೆಗೆ ಮುಂದಾಗಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಐ ಲಕ್ಷ್ಮೀಪತಿ ಅವರು ಆರೋಪಿಗೆ ಶರಣಾಗುವಂತೆ ಸೂಚಿಸಿದ್ದರು.ಆದರೂ ಸಹ ಆರೋಪಿ‌ ಪರಾರಿಯಾಗಲು ಯತ್ನಿಸಿದ ಮೇರೆಗೆ ಆರೋಪಿತನ ಬಲಗಾಲಿಗೆ ತಮ್ಮ ಸರ್ವಿಸ್ ರಿವಾಲ್ವರ್​ನಿಂದ ಗುಂಡು ಹಾರಿಸಿ ಸೆರೆ ಹಿಡಿದ್ದಾರೆ. ಆರೋಪಿಯ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಪ್ರಕಾಶ್​​ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಆರೋಪಿ ಮಂಜುವನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ