Breaking News

ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ

Spread the love

ಬೆಂಗಳೂರು, ಮೇ 21: ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ (Rajakaluve) ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ (ಮೇ. 21) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಹಾಗೂ ಇತರ ಜನಪ್ರತಿನಿಧಿಗಳು ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್‌ಬಿಆರ್ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದರು.


Spread the love

About Laxminews 24x7

Check Also

12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

Spread the loveಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ