Breaking News

ಧಾರವಾಡದಲ್ಲಿ ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ಆದೇಶ

Spread the love

ಧಾರವಾಡ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು.‌ ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ರಜೆಯ ಮೇಲೆ ತೆರಳಬೇಕಾದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದು, ರಜೆಯ ಮೇಲೆ ತೆರಳಬೇಕೆಂದು ಡಿಸಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ