Breaking News

ಸೂಟ್​ಕೇಸ್​ನಲ್ಲಿ ಯುವತಿ ಶವ

Spread the love

ಆನೇಕಲ್ (ಬೆಂಗಳೂರು): ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ರೈಲ್ವೆ ಬ್ರಿಡ್ಜ್ ಸಮೀಪ ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಪರಿಶೀಲನೆ ವೇಳೆ ಸಾರ್ವಜನಿಕರು ಶಾಕ್ ಆಗಿದ್ದಾರೆ.

ಹೊಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ.

ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ಸೂಟ್ ಕೇಸ್ ನಲ್ಲಿ ತುಂಬಿದ್ದಾರೆ. ಕಿವಿ ಮತ್ತು ಮೂಗಿನಲ್ಲಿ ರಕ್ತಸ್ರಾವ ಆಗಿರುವ ಕುರುಹು ಇದ್ದು, ಉಳಿದಂತೆ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಬೇರೆಲ್ಲೋ ಕೊಲೆಗೈದು ರೈಲಿನಲ್ಲಿ ಸಾಗುವ ವೇಳೆ ಮೃತದೇಹವನ್ನು ಹೊರಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಆರಂಭದಲ್ಲಿ ಸ್ಥಳೀಯರಿಗೆ ಸೂಟ್ ಕೇಸ್ ನಲ್ಲಿ ಯುವತಿ ಮುಖ ಮಾತ್ರ ಕಾಣಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈಲ್ವೆ ಹಳಿ ಸಮೀಪ ಯುವತಿ ಶವ ಪತ್ತೆ ಹಿನ್ನೆಲೆ ರೈಲ್ವೆ ಕೇಸ್ ದಾಖಲಿಸಿಕೊಳ್ಳಲಿದ್ದಾರೆ ಎಂದು ಪೊಲೀಸರು ಕಾದು ಕುಳಿತಿದ್ದರು. ಆದ್ರೆ ರೈಲ್ವೆ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಬಳಿಕ ಸೂರ್ಯನಗರ ಠಾಣೆ ಪೊಲೀಸರು ‌ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ