Breaking News

ಮೆಟ್ರೊದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೊ ಸೆರೆಹಿಡಿಯುತ್ತಿದ್ದ ಆರೋಪಿ ಬಂಧನ

Spread the love

ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್​​ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್​​ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ.

ದಿಗಂತ್ (28) ಬಂಧಿತ ಆರೋಪಿ. ಹಾಸನದ ಹೊಳೆನರಸೀಪುರ ಮೂಲದ ದಿಗಂತ್ 20 ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದ. ಈತನ ತಂದೆ ಕಂಪೆನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು ಕುಟುಂಬಸ್ಥರೊಂದಿಗೆ ಪೀಣ್ಯದ ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.

ಇಂದಿರಾನಗರದ ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದು, ಪ್ರತಿದಿನ ಮೆಟ್ರೊದಲ್ಲಿ ಓಡಾಡುತ್ತಿದ್ದರು. ಪ್ರಯಾಣದ ವೇಳೆ ಮಹಿಳೆಯರ ಹಾಗೂ ಯುವತಿಯರ ವಿಡಿಯೋಗಳನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಮೆಟ್ರೋ ಚಿಕ್ಸ್ ಎಂಬ ಹೆಸರಿನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಅಪ್ ಲೋಡ್ ಮಾಡುತ್ತಿದ್ದ. ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ