Breaking News

ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ

Spread the love

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್​ಎಸ್​ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾ ಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದರು.

ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿಸಿದರು.

ಕಸ ವಿಲೇವಾರಿಗೆ ಸ್ವಚ್ಛ ಬೆಂಗಳೂರು ಕಾರ್ಯಕ್ರಮ: ಇನ್ನು ಬೆಂಗಳೂರಿನ ಕಸ ವಿಲೇವಾರಿ ವಿಚಾರವಾಗಿ ದೊಡ್ಡ ಕ್ಷೇತ್ರಗಳಲ್ಲಿ ಎರಡರಂತೆ ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್ ಗಳನ್ನು ಕರೆಯಲು ತೀರ್ಮಾನಿಸಿದ್ದೇವೆ. ಸುಮಾರು ₹4000 ಕೋಟಿ ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ