Breaking News

ಮಂಗಳೂರಿನಲ್ಲಿ ಭಾರಿ ಮಳೆ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ.

ಮಂಗಳೂರಿನ ಪಂಪ್​ವೆಲ್ ಸೇರಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮರಗಳು ಧರಾಶಾಹಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಮೀನುಗಾರರಿಗೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ವಾಡಿಕೆಗಿಂತ ಒಂದು ವಾರ ಮೊದಲೇ ಮುಂಗಾರು ರಾಜ್ಯದ ಕರಾವಳಿ ಪ್ರವೇಶಿಸಿದೆ. ಸಾಮಾನ್ಯವಾಗಿ ಮೇ 31ರ ಸುಮಾರಿಗೆ ಮುಂಗಾರು ಕೇರಳ ಪ್ರವೇಶಿಸುತ್ತಿತ್ತು. ಆದರೆ ಈ ಬಾರಿ ಮೇ 24ಕ್ಕೇ ಕೇರಳ ಕರಾವಳಿ ತಲುಪಿದ್ದು, ಇದರ ಬೆನ್ನಲ್ಲೇ ರಾಜ್ಯದ ಕರಾವಳಿ ಪ್ರದೇಶಗಳನ್ನು ಮಳೆ ಶುರುವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ