Breaking News

ಅತ್ಯಾಚಾರ ಆರೋಪಮನುಗೆ 14 ದಿನಗಳ ನ್ಯಾಯಾಂಗ ಬಂಧನ

Spread the love

ಬೆಂಗಳೂರು: ಅತ್ಯಾಚಾರ ಆರೋಪದಡಿ ಬಂಧಿಸಲ್ಪಟ್ಟಿರುವ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಖ್ಯಾತಿಯ ನಟ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 3ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಈ ಹಿಂದೆ ಖಾಸಗಿ ವಾಹಿನಿಯ ರಿಯಾಲಿಟಿ ಶೋವೊಂದರಲ್ಲಿ ಮನು ಭಾಗಿಯಾಗಿದ್ದರು. ಅದೇ ಶೋನಲ್ಲಿ ಭಾಗಿಯಾಗಿದ್ದ ಸಹ ಸ್ಪರ್ಧಿಯೊಬ್ಬರು ನೀಡಿದ್ದ ದೂರಿನನ್ವಯ ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಕಾಮಿಡಿ ಕಾರ್ಯಕ್ರಮವೊಂದಕ್ಕೆ 2022ರಲ್ಲಿ ಶಿಕಾರಿಪುರಕ್ಕೆ ತೆರಳಿದ್ದಾಗ, ತನ್ನ ಮೇಲೆ ಮನು ಅತ್ಯಾಚಾರವೆಸಗಿದ್ದ‌. ಆ ನಂತರವೂ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಗರ್ಭಪಾತ ಮಾಡಿಸಿದ್ದಾನೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದರು. ಮೇ 22ರಂದು ಮನು ಅವರನ್ನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ