Breaking News

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Spread the love

ದಕ್ಷಿಣ ಕನ್ನಡ, ಮೇ 26: ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ (Rain). ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ನಾಳೆಯೂ (ಮೇ.27) ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರ

ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಧೋ ಎಂದು ಸುರಿಯುತ್ತಿದೆ. ಮಂಗಳೂರಿನ ಪಂಪ್‌ವೆಲ್ ಫ್ಲೈ ಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ