Breaking News

ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ

Spread the love

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು ಹರಿದುಬರುತ್ತಿದೆ.ಇಂದು(ಮೇ 26) ಬೆಳಿಗ್ಗೆ 89 ಅಡಿ ನೀರಿನ ಮಟ್ಟ ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ ಹೆಚ್ಚುವರಿ 1 ಅಡಿ ನೀರು ಹರಿದುಬಂದಿತ್ತು. ಅದು ಸಂಜೆ ವೇಳೆ ಸಂಜೆ ವೇಳೆಗೆ 90.20 ಅಡಿಗೆ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಕೆಆರ್​ ಎಸ್​ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ರೈತರಲ್ಲಿ ಮಂದಹಾಸ ಮೂಡಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ