Breaking News

ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್

Spread the love

ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್…
. ಉಸ್ತುವಾರಿ ಸಚಿವ ಲಾಡ್, ವಿರೋಧ ಪಕ್ಷದ ಉಪನಾಯಕ ಬೆಲ್ಲದ, ನವಲಗುಂದ ಎಂಎಲ್ಎ ಕೊನರೆಡ್ಡಿ ಭಾಗಿ..
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಬಂಧ ಉಚಿತ ಆರೋಗ್ಯ ತಪಾಸಣೆ ಸಂಚಾರಿ ಆರೋಗ್ಯ ವಾಹನಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಮಂಗಳವಾರದಂದು ಚಾಲನೆ ನೀಡಿದರು.
ಕಾರ್ಮಿಕ ಇಲಾಖೆಯಿಂದಲೇ ಈ ವಾಹನಗಳನ್ನು ನೀಡಲಾಗಿದೆ. ಧಾರವಾಡ ಜಿಲ್ಲೆಗೆ ಒಟ್ಟು ಮೂರು ವಾಹನಗಳು ಮಂಜೂರಾಗಿವೆ.
ಈ ವಾಹನಗಳಲ್ಲಿ ಒಟ್ಟು 20 ಬಗೆಯ ಆರೋಗ್ಯ ತಪಾಸಣೆ ನಡೆಯಲಿದೆ.
ಕಾರ್ಮಿಕರು ಇದ್ದಲ್ಲಿಗೇ ಹೋಗಿ ಈ ವಾಹನಗಳು ಆರೋಗ್ಯ ತಪಾಸಣೆ ನಡೆಸಲಿವೆ. ಈ ವಾಹನಗಳಿಗೆ ಸಚಿವ ಲಾಡ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್, ನವಲಗುಂದ ಎಂಎಲ್‌ಎ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಎಸ್‌ಪಿ ಡಾ.ಗೋಪಾಲ ಬ್ಯಾಕೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ