Breaking News

ಕನ್ನಡಿಗರ ಪ್ರೀತಿಗೆ ಸದಾ ಋಣಿ’: ಬೆಂಗಳೂರಿಗೆ ಆಗಮಿಸಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

Spread the love

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನ ಇತ್ತೀಚೆಗೆ ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು.

ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಲಂಡನ್​ನಲ್ಲಿ ಪ್ರಶಸ್ತಿ ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಾನು ಮುಷ್ತಾಕ್, “ಕನ್ನಡದ ಸಂಭ್ರಮವನ್ನು ಲಂಡನ್​ನಲ್ಲಿ ಮುಗಿಸಿಕೊಂಡು ಕನ್ನಡ ನಾಡಿನಲ್ಲೂ ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್​ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು” ಎಂದರು‌.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ