ಬೆಂಗಳೂರು : ಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ (80) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನೇಕ ಚಿತ್ರಗಳಿಗೆ ಹಾಡುಗಳು, ಕಥೆ ಮತ್ತು ಸಂಭಾಷಣೆ ಬರೆದಿದ್ದ ಅವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವೆಂಕಟೇಶ ಮೂರ್ತಿಯವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ್ದ ವೆಂಕಟೇಶಮೂರ್ತಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ, ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ ಪದವಿ ಪಡೆದಿದ್ದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧ ಮಂಡಿಸಿ ಪಿಹೆಚ್ಡಿ ಪಡೆದಿದ್ದರು. 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಿಂದ ಕನ್ನಡ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು 2000ದಲ್ಲಿ ನಿವೃತ್ತಿ ಹೊಂದಿದ್ದರು.
Laxmi News 24×7