Breaking News

4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು*

Spread the love

4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು
*ಬೆಳಗಾವಿ:* ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಚೆಕ್ ಗಳನ್ನು ಹಸ್ತಾಂತರಿಸಿದರು.
ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ ರೂಪಾಯಿ, ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ 6.66 ಲಕ್ಷ ರೂಪಾಯಿ, ಸಾಂಬ್ರಾ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ 4 ಲಕ್ಷ ರೂಪಾಯಿ, ಉಚಗಾಂವ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ 10 ಲಕ್ಷ ರೂಪಾಯಿ ಚೆಕ್ ಗಳನ್ನು ಸಚಿವರು ಹಸ್ತಾಂತರಿಸಿದರು. ‌
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಸಚಿವರು ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಸಚಿವರು ಪರಿಹಾರ ನೀಡಿದರೆ, ಉಳಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ