Breaking News

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ನೂಕುನುಗ್ಗಲು: ಮಹಿಳೆ ಸೇರಿ 11 ಸಾವು, ಹಲವರಿಗೆ ಗಾಯ

Spread the love

ಬೆಂಗಳೂರು: ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಪಾಲ್ಗೊಳ್ಳಲು ನಗರದ ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ಹೋಗುವ ಆತುರದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ಧಾರೆ.

ತಮ್ಮ ನೆಚ್ಚಿನ ಆಟಗಾರರನ್ನು ಸನಿಹದಿಂದ ಕಣ್ತುಂಬಿಕೊಳ್ಳಲು ಸ್ಟೇಡಿಯಂಗೆ ಜನಸಾಗರವೇ ಹರಿದು ಬಂದಿತ್ತು. ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಯಿತು.

ಗಾಯಗೊಂಡವರನ್ನು ಕೂಡಲೇ ಸಮೀಪದ ಬೌರಿಂಗ್​ ಮತ್ತು ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.ದುರಂತದಲ್ಲಿ 14 ವರ್ಷದ ದಿವ್ಯಾಂಶಿ ಎಂಬ ವಿದ್ಯಾರ್ಥಿನಿ ಕೂಡ ಮೃತಪಟ್ಟಿರುವ ಮಾಹಿತಿ ಇದೆ.

9ನೇ ತರಗತಿ ಓದುತ್ತಿದ್ದ ಮೃತ ದಿವ್ಯಾಂಶಿ, ಅಪ್ಪ ಶಿವಕುಮಾರ್ ಹಾಗೂ ಅಮ್ಮ ಅಶ್ವಿನಿ ಜೊತೆ ಸ್ಟೇಡಿಯಂಗೆ ಬಂದಿದ್ದಳು. ಈ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ‌ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ಇದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ