Breaking News

4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್

Spread the love

4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್
ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ (ಸೈಂಟಿಸ್ಟ್ ಮಂಜ್ಯಾ), ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ದಾವೂದ್ ನದಾಫ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣ ಗಭ್ಯಾ ಎಂಬುವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ‌ ಎಂದು ಮಾಹಿತಿ ನೀಡಿದರು.
ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 1700ಕ್ಕೂ ಹೆಚ್ಚು ರೌಡಿಶೀಟರ್‌ಗಳಿದ್ದಾರೆ. ಅದರಲ್ಲಿ ಈ ಹಿಂದೆ 52 ಆರೋಪಿಗಳನ್ನು ಗಡಿಪಾರು ಮಾಡಲಾಗಿತ್ತು. ಈಗ 31 ಜನ ಸೇರಿ ಒಟ್ಟು 83 ಜನರ ಗಡಿಪಾರು ಮಾಡಲಾಗಿದೆ. ಇನ್ನೂ ಅನೇಕರ ಪಟ್ಟಿ ತಯಾರಿಸಲಾಗುತ್ತಿದೆ. ಮೂರನೇ ಹಂತದಲ್ಲಿ ಇನ್ನಷ್ಟು ಜನರ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು.

Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ