Breaking News

ರೇವಣ್ಣ ಮತ್ತು ಪ್ರಜ್ವಲ್​ ಅರ್ಜಿಗಳ ಪ್ರತ್ಯೇಕ ವಿಚಾರಣೆಗೆ ಹೈಕೋರ್ಟ್ ಅನುಮತಿ

Spread the love

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ತನ್ನ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದರು.

ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್‌ ಅವರಿದ್ದ ಏಕಸದಸ್ಯ ಪೀಠಕ್ಕೆ ಅರ್ಜಿದಾರರ ಪರ ವಕೀಲರು, ಹೆಚ್​.ಡಿ.ರೇವಣ್ಣ ಅರ್ಜಿಯೊಟ್ಟಿಗಿನ ವಿಚಾರಣೆ ಬದಲಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ಪೀಠ, ಹೆಚ್​.ಡಿ.ರೇವಣ್ಣ ಎಫ್‌ಐಆರ್‌ ಮತ್ತು ಆರೋಪ ಪಟ್ಟಿ ಪ್ರಶ್ನಿಸಿರುವ ಅರ್ಜಿ ಮತ್ತು ಪ್ರಜ್ವಲ್‌ ಜಾಮೀನು ಅರ್ಜಿಯನ್ನು ಒಂದಾದ ನಂತರ ಮತ್ತೊಂದು ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿತು. ಜೊತೆಗೆ ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ಅರ್ಜಿಯ ವಿಚಾರಣೆಯನ್ನು ಜೂನ್‌ 13ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಜೆಡಿಎಸ್‌ ಶಾಸಕ ಹೆಚ್‌.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಾರಂಭದಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿತ್ತು. ಅತ್ಯಾಚಾರ ಆರೋಪ ಸೇರಿಸಲಾಗಿದೆ. ಈ ನಡುವೆ, ರೇವಣ್ಣ ಅವರು ಎಫ್‌ಐಆರ್‌ ಮತ್ತು ಆರೋಪ ಪಟ್ಟಿ ರದ್ದು ಕೋರಿರುವ ಅರ್ಜಿಗೆ ಹೈಕೋರ್ಟ್​​ನ ಮತ್ತೊಂದು ಪೀಠ ತಡೆಯಾಜ್ಞೆ ನೀಡಿದೆ.

ವಿಚಾರಣಾಧೀನ ನ್ಯಾಯಾಲದಲ್ಲಿಯೂ ರೇವಣ್ಣ ಅವರ ವಿಚಾರಣೆಗೆ ತಡೆ ನೀಡಲಾಗಿದೆ. ಹೈಕೋರ್ಟ್​ನಲ್ಲಿ ರೇವಣ್ಣ ಅವರಿಗೆ ಸೀಮಿತವಾಗಿ ತಡೆ ನೀಡಿ, ಪ್ರಜ್ವಲ್‌ ವಿರುದ್ಧ ವಿಚಾರಣೆ ಮುಂದುವರಿಸಲು ಕಾನೂನಿನಲ್ಲಿ ಅನುಮತಿ ಇಲ್ಲ ಎಂದು ಪೀಠಕ್ಕೆ ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ