Breaking News

10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

Spread the love

10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.
ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಸಚಿವರು ಚಾಲನೆ ನೀಡಿದರು. ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಸ್ಥಳೀಯರ ಸಲಹೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ನಾಥಬುವಾ, ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ್, ಹೆಸ್ಕಾಂ ಅಧಿಕಾರಿಗಳಾದ ಲಮಾಣಿ, ಅಶ್ವಿನ್ ಶಿಂಧೆ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ವೈಭವ ನಗರದ ನಿವಾಸಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಂತಾದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ