ಬೆಳಗಾವಿ: ಪೂರ್ವ ಮುಂಗಾರು ಬಳಿಕ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ಅಬ್ಬರಿಸಿದ್ದು, ಸವದತ್ತಿ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಹೌದು, ನಿನ್ನೆ ಸಂಜೆ ಸವದತ್ತಿ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿಯಿತು. ಭಾರಿ ಮಳೆಗೆ ಇಲ್ಲಿನ ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದವು. ರಸ್ತೆ ಮೇಲೆ ರಭಸವಾಗಿ ನೀರು ಹರಿದ ಪರಿಣಾಮ ಎರಡು ಗಂಟೆ ಸಂಚಾರ ಬಂದ್ ಆಗಿತ್ತು. ವಾಹನ ಸವಾರರು ಪರದಾಡಿದರು
ಅದೇ ರೀತಿ ಹಾರೂಗೊಪ್ಪ ಅಕ್ಕಪಕ್ಕದ ಚಚಡಿ, ಗೊಂತಮಾರ ಸೇರಿ ಮತ್ತಿತರ ಗ್ರಾಮಗಳಲ್ಲೂ ಉತ್ತಮ ಮಳೆಯಾಗಿದೆ.
ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಿದ ಮಳೆ: ಬಿಸಿಲೂರು ರಾಯಚೂರು ಜಿಲ್ಲೆಯ ವಿವಿಧೆಡೆ ಶನಿವಾರ ಮಳೆ ಅಬ್ಬರಿಸಿದ ಪರಿಣಾ ಫತ್ತೆಪೂರ ಗ್ರಾಮದಲ್ಲಿನ ಹಳೆಯ ಸೇತುವೆ ಕೊಚ್ಚಿಹೋಗಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ.
ರಾಯಚೂರು ತಾಲೂಕಿನ ಫತ್ತೆಪೂರ ಗ್ರಾಮದ ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದು ಹಳೆ ಸೇತುವೆ ಕೊಚ್ಚಿ ಹೋಗಿದೆ. ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಗ್ರಾಮಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ, ನೀರಿನ ರಭಸಕ್ಕೆ ಟಿಪ್ಪರ್ ಲಾರಿಯೊಂದು ಹಳ್ಳದಲ್ಲೇ ಸಿಲುಕಿಕೊಂಡಿದೆ.
Laxmi News 24×7