Breaking News

ಒಬ್ಬನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಬಾಲಕರೂ ನೀರುಪಾಲು

Spread the love

ಮದುವೆಗೆಂದು ಬಂದಿದ್ದ ಒಂದೇ ಕುಟುಂಬದ ಬಾಲಕರು, ನದಿಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿ ಆರು ಬಾಲಕರೂ ನೀರು ಪಾಲಾಗಿರುವ ಘಟನೆ ನಡೆದಿದೆ.

ತೆಲಂಗಾಣದ ಭೂಪಾಲಪಲ್ಲಿಯ ಮಹದೇವಪುರ ಮಂಡಲದಲ್ಲಿ ಈ ದುರಂತ ಸಂಭವಿಸಿದೆ. ಮದುವೆ ಸಮಾರಂಭಕ್ಕೆಂದು ಬಂದಿದ್ದ ಆರು ಜನ ಅಪ್ರಾಪ್ತ ಬಾಲಕರು ತಮಗೆ ಈಜಲು ಬಾರದಿದ್ದರೂ, ಗೋದಾವರಿನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಓರ್ವ ಬಾಲಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಆತನನ್ನು ರಕ್ಷಿಸಲೆಂದು ಒಬ್ಬರ ಹಿಂದೊಂಬ್ಬರಂತೆ ಆತನನ್ನು ಹಿಂಬಾಲಿಸಿದ್ದಾರೆ. ಹೀಗೆ ಹೋದವರು ಆರು ಜನರೂ ನೀರುಪಾಲಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಮಧುಸೂಧನ್ (18), ಪಟ್ಟಿ ಶಿವಮನೋಜ್, (15), ತೊಗರಿ ರಕ್ಷಿತ್ (13), ಸಾಗರ್ (16), ಬೊಲ್ಲೆದ್ಲಾ ರಾಮಚರಣ್ (17), ಪಸುಲ ರಾಹುಲ್ (19), ಪಟ್ಟಿ ಶಿವಮಣಿ ಎಂದು ಗುರುತಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ