Breaking News

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಅಬ್ಬರಿಸಲಿದೆ ಮಳೆ

Spread the love

ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಒಂದೆರೆಡು ದಿನಗಳಿಂದ ಅಲ್ಲಲ್ಲಿ ಮಳೆ ಆಗಿದ್ದು, ಇಂದಿನಿಂದ ನಾಲ್ಕು ದಿನ ಎಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ  ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಹಾಗಾಗಿ 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಇದಲ್ಲದೆ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ