Breaking News

ಶುಕ್ರವಾರ ಕೋರ್ಟ್​ಗೆ ಹಾಜರಾಗ್ತೇನೆ: ಶಾಸಕ ವಿನಯ ಕುಲಕರ್ಣಿ

Spread the love

ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ ಹಿಂದೆ ಈ ರೀತಿ ಕುತಂತ್ರ ಮಾಡುವುದು ಸಹಜ. ಇದಕ್ಕೆ ಏನು ಮಾಡೋಕೆ ಆಗುವುದಿಲ್ಲ, ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ನನ್ನ ಪಕ್ಷ, ಕ್ಷೇತ್ರದ ಜನರು ಜೊತೆಗಿದ್ದಾರೆ. ಪತ್ನಿ, ಮಕ್ಕಳು ಹೊರಗಡೆ ಇದ್ದು ಎಲ್ಲವನ್ನೂ ನೋಡಿಕೊಳ್ಳುತ್ತಾರೆ‌. ಹಾಗಾಗಿ, ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ. ಕೇಸ್ ಏನಾಗುತ್ತದೆ ನೋಡುತ್ತೇನೆ. ನನಗೆ ಸಚಿವ ಸ್ಥಾನ ನೀಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ನನ್ನ ವಿರುದ್ಧ ಕುತಂತ್ರ ಮಾಡಿದವರಿಗೆ ಸಂದೇಶ ಕೊಡುವ ಅವಶ್ಯಕತೆ ಇಲ್ಲ. ನನ್ನ ವಿರೋಧಿಗಳಿಗೆ ಕಾಲವೇ ಉತ್ತರಿಸುತ್ತದೆ. ಕಾಲಾಯ ತಸ್ಮೈ ನಮಃ ಎಂದಷ್ಟೇ ಎಂದು ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ