Breaking News

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

Spread the love

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ
*ನವದೆಹಲಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆ ಆಗಬೇಕಿರುವ ಅಕ್ಕಿ, ಗೋಧಿ, ಅನುದಾನ ಹಾಗೂ ಅಂಗನವಾಡಿ FRS ಗಳಲ್ಲಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಲಾಯಿತು.
ಈ ವೇಳೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಅನಿಲ್ ಮಲ್ಲಿಕ್, ಹೆಚ್ಚುವರಿ ಕಾರ್ಯದರ್ಶಿಗಳಾದ ಪ್ರೀತಮ್ ಯಶವಂತ, ಜ್ಞಾನೇಶ್ ಭಾರತಿ, ಕಾರ್ಯದರ್ಶಿಗಳಾದ ಶ್ಯಾಮ್ಲಾ ಇಕ್ಬಾಲ್, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ.ಎಚ್. ಉಪಸ್ಥಿತರಿದ್ದರು.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ